ನೆಲದನುಡಿ ನ್ಯೂಸ್, ಗದಗ
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸ್ಪರ್ಧೆಗೆ ವಿವಿಧ ಹಂತದಲ್ಲಿ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯದಲ್ಲಿನ ಯುವ ಜನತೆಯು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೇರೆಪಿಸುವ ನಿಟ್ಟಿನಲ್ಲಿ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯ ಅಂಗವಾದ ಇಂಡಿಯಾ ಸ್ಕೀಲ್ ಕರ್ನಾಟಕ ಸ್ಪರ್ಧೆಗಳಿಗೆ ರಾಜ್ಯವನ್ನು ಪ್ರತಿನಿಧಿಸಲು ನಿಗಮವು ಜಿಲ್ಲಾ, ವಲಯ ಹಾಗೂ ರಾಜ್ಯಮಟ್ಟದ ಸ್ಪರ್ಧೆಯನ್ನು ಏರ್ಪಡಿಸಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು 7ನೇ ಜನೇವರಿ 2024 ರೊಳಗಾಗಿ ನೊಂದಾಯಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದಿ ಕಛೇರಿ ಗದಗ ಜಿಲ್ಲೆಯ ಸಂಕಲ್ಪ ಸಂಯೋಜನಕರಾದ ಶಿವಾನಂದ ಕಂಬಾರ ಮೊ.-9916185682 ರವರಿಗೆ ಸಂಪರ್ಕಿಸಬಹುದಾಗಿದೆ ಅಥವಾ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:18005999918 ನ್ನು ಹಾಗೂ ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ ಕೊಠಡಿ ಸಂಖ್ಯೆ-106, ಜಿಲ್ಲಾಡಳಿತ ಭವನ, 1ನೇ ಮಹಡಿ ಗದಗ ಇಲ್ಲಿ ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಗದಗ ಜಿಲ್ಲಾ ಕೌಶಲ್ಯಾಬಿವೃದ್ದಿ ಅಧಿಕಾರಿಗಳಾದ ಡಾ. ಮಲ್ಲೂರ ಬಸವರಾಜ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.