ನೆಲದನುಡಿ ನ್ಯೂಸ್, ಗದಗ
ನಗರದ ಬಾಲವಿನಾಯಕ ವಿದ್ಯಾನಿಕೇತನ ಶಾಲೆಯ 38ನೇ ವಾರ್ಷಿಕ ಸ್ನೇಹ ಸಮ್ಮೇಳನವು ದಿ.05 ಶುಕ್ರವಾರ ಜರಗುವುದು.
ಪೂರ್ವ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳ ಕಾರ್ಯಕ್ರಮ ಮುಂಜಾನೆ 9.00 ಘಂಟೆಗೆ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳ ವಾರ್ಷಿಕೋತ್ಸವವು ಸಂಭಾಪೂರ ರಸ್ತೆಯಲ್ಲಿರುವ ಶಾಲಾ ಆವರಣದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ. ಮಂಜಮ್ಮ ಜೋಗತಿ ಆಗಮಿಸಲಿದ್ದಾರೆ. ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು ಮತ್ತು ಸಮಸ್ತ ಸಿಬ್ಬಂದಿ ವರ್ಗದವರು ತಮ್ಮೆಲ್ಲರಿಗೂ ಆದರದ ಸ್ವಾಗತವನ್ನು ಕೋರಿದ್ದಾರೆ.