Monday, December 23, 2024
Homeಆರೋಗ್ಯಯೋಜನೆಗಳು ಜನರಿಗೆ ತಲುಪುವಲ್ಲಿ ಮಾಧ್ಯಮ ಸಹಕಾರಿ: ಡಾ. ರಾಜೇಂದ್ರ ಬಸರಿಗಿಡದ

ಯೋಜನೆಗಳು ಜನರಿಗೆ ತಲುಪುವಲ್ಲಿ ಮಾಧ್ಯಮ ಸಹಕಾರಿ: ಡಾ. ರಾಜೇಂದ್ರ ಬಸರಿಗಿಡದ

ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ

ನೆಲದನುಡಿ ನ್ಯೂಸ್, ಗದಗ

ಆರೋಗ್ಯ ಇಲಾಖೆಯು ಜಿಲ್ಲೆಯ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸರಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ರಾಜೇಂದ್ರ ಬಸರಿಗಿಡದ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಆರೋಗ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾಮಟ್ಟದ ಮಾಧ್ಯಮ ಮಿತ್ರರಿಗೆ ಹಮ್ಮಿಕೊಂಡ ಕಾರ್ಯಾಗಾರನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ಮಾನ ಭಾರತ ಆರೋಗ್ಯ ಕರ್ನಾಟಕದ ಯೋಜನೆಯಲ್ಲಿ ಒಟ್ಟು 1650 ಖಾಯಿಲೆಗಳಿಗೆ ಬಿಪಿಎಲ್ ಕಾರ್ಡದಾರರಿಗೆ 5 ಲಕ್ಷ ರೂ. ಹಾಗೂ ಎಪಿಎಲ್ ಕಾರ್ಡದಾರರಿಗೆ 1.50 ಲಕ್ಷ ರೂಗಳ ವರೆಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಅಲ್ಲದೆ, ಈ ಯೋಜನೆಯಲ್ಲಿ ಕೋವಿಡ್‌ನ್ನು ಸೇರಿಸಲಾಗಿದೆ ಎಂದು ಹೇಳಿದ ಅವರು ಜಿಲ್ಲೆಯಲ್ಲಿ ಅಬಾ ಆರೋಗ್ಯ ಕಾರ್ಡ ಯೋಜನೆಯಲ್ಲಿ ಒಟ್ಟು 86,061 ಅರ್ಹ ಕಾರ್ಡದಾರರಲ್ಲಿ 72,498 ಫಲಾನುಭವಿಗಳ ಚಿಕಿತ್ಸೆಗಾಗಿ 25,35,23,764 ರೂಗಳನ್ನು ಸರಕಾರ ವೆಚ್ಚ ಮಾಡಿದ್ದು, ಆರೋಗ್ಯ ಇಲಾಖೆಯ ಅನೇಕ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆಯಲು ಸಾರ್ವಜನಿಕರು ಮುಂದೆ ಬರಬೇಕು ಎಂದು ಹೇಳಿದರು.

ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿದ ಆರ್‌ಸಿಎಚ್ ಅಧಿಕಾರಿ ಡಾ.ಮೀನಾಕ್ಷಿ ಎಸ್‌ಕೆ. ಮಾತನಾಡಿ, 2027ರ ಒಳಗಾಗಿ ಕುಷ್ಟರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ನಮ್ಮ ಇಲಾಕೆಯ ಸಿಬ್ಬಂದಿಗಳು ಸಾಂಕ್ರಾಮಿಕ ರೋಗಗಳನ್ನು ನಿರ್ಮೂಲನೆ ಮಾಡಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಮಾತನಾಡಿ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಆರೋಗ್ಯ ಇಲಾಖೆಯು ಮಾಧ್ಯಮವನ್ನು ಹೆಚ್ಚು ಬಳಸಿಕೊಳ್ಳಬೇಕು. ಈ ಕಾರ್ಯಾಗಾರದಲ್ಲಿ ಪತ್ರಕರ್ತರು ಆರೋಗ್ಯ ಇಲಾಖೆಯ ಹಲವಾರು ಯೋಜನೆಗಳನ್ನು ತಿಳಿದುಕೊಂಡು ಸಾರ್ವಜನಿಕರಿಗೆ ಸೇವೆ ತಲುಪುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕೆಂದರು. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಹೆಚ್ಚಿನ ಸಹಕಾರ ದೊರೆತಿದ್ದು, ಕೇಂದ್ರ ಸರಕಾರದ ಆಬಾ ಕಾರ್ಡನ ಪ್ರಯೋಜನ ಮಾಧ್ಯಮ ಪ್ರತಿನಿಧಿಗಳಿಗೆ ದೊರೆಯುವಂತಾಗಬೇಕು ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಮಾತನಾಡಿ, ಆರೋಗ್ಯ ಇಲಾಖೆ ಯೋಜನೆಗಳು ಸಾರ್ವಜನಿಕರಿಗೆ ತಲಪುವ ನಿಟ್ಟಿನಲ್ಲಿ ಮಾಧ್ಯಮ ಹೆಚ್ಚು ಕ್ರೀಯಾಶೀಲವಾಗಿ ಕಾರ್ಯ ನಿರ್ವಹಿಸುತ್ತ ಬಂದಿದೆ. ಜನರಿಗೆ ಆರೋಗ್ಯ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಮಾಧ್ಯಮವು ಆರೋಗ್ಯ ಇಲಾಖೆಯೊಂದಿಗೆ ಕೊಂಡಿಯಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಈ ಕಾರ್ಯಾಗಾರದಲ್ಲಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ್ ಪೈ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ ಸೇರಿದಂತೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅಧಿಕಾರಿಗಳು, ಪತ್ರಕರ್ತರು ಭಾಗವಹಿಸಿದ್ದರು. ಗೀತಾ ಕಾಂಬಳೆ ನಿರೂಪಿಸಿದರು. ಕುಬಸದ ವಂದಿಸಿದರು.

 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!