ನೆಲದನುಡಿ ನ್ಯೂಸ್, ಗದಗ
ಪತ್ರಿಕೆಗಳು ಶಾಸಕಾಂಗದ ವ್ಯವಸ್ಥೆ ಮೇಲೆ ಬಹುದೊಡ್ಡ ಪರಿಣಾಮ ಬೀರುವ ಅಸ್ತçವಾಗಿವೆ. ಪತ್ರಿಕೆಗಳು ಶಾಸಕಾಂಗಕ್ಕೆ ಸರಿಯಾದ ಮಾರ್ಗದರ್ಶನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಸಕಾಂಗದ ಮೇಲೆ ಪರಿಣಾಮ ಬೀರುವ ಏಕೈಕ ರಂಗ ಪತ್ರಿಕಾರಂಗ. ಶಾಸಕಾಂಗದ ತಪುö್ಪಗಳನ್ನು ತಿದ್ದಿ ಹೇಳುವ ಅಸ್ತçವಾಗಬೇಕು. ಪತ್ರಿಕೆಗಳು ಸತ್ಯವನ್ನು ಮರೆಮಾಚುವ ಕೆಲಸ ಮಾಡದೇ ಜನರ ಧ್ವನಿಯಾಗಬೇಕು. ಇಂದು ಪತ್ರಿಕೆ, ಟಿವಿ ಮಾಧ್ಯಮಗಳ ಜತೆಗೆ ಸೋಷಿಯಲ್ ಮೀಡಿಯಾ ಪ್ರಭಾವ ಬೀರುತ್ತಿದೆ. ಪತ್ರಿಕೆಗಳು ಬದಲಾವಣೆ ಮಾಡಿಕೊಳ್ಳದಿದ್ದಲ್ಲಿ ಪರಿಣಾಮ ಎದುರಿಸಬೇಕಾಗಿ ಬರಬಹುದು ಎಂದು ಎಚ್ಚರಿಸಿದರು.
ಈ ಹಿಂದೆ ಪತ್ರಿಕೆಗಳು ಸ್ವಾತಂತ್ರö್ಯ ಹೋರಾಟದ ಧ್ವನಿಯಾಗಿದ್ದವು. ರಾಜಕೀಯ ನಿಲುವುಗಳನ್ನು ಜನರಿಗೆ ತಲುಪಿಸವುದಾಗಿತ್ತು. ಸತ್ಯ ಸಂಗತಿಗಳನ್ನು ಮರೆಮಾಚದೆ ಅಭಿವ್ಯಕ್ತಗೊಳಿಸುವುದಾಗಿತ್ತು. ಆದರೆ ಇಂದು ದೇಶದಲ್ಲಿ ಪತ್ರಿಕೋದ್ಯಮ ಪತ್ರಿಕೋದ್ಯಮವಾಗಿ ಉಳಿದಿಲ್ಲ. ಕೆಲವು ಮಾಲೀಕರ ಕೈಯೊಳಗಿನ ಪತ್ರಿಕೋದ್ಯವಾಗಿದೆ ಎಂದರು.
ಭ್ರಷ್ಟಾಚಾರದಲ್ಲಿ ತೊಡಗಿಕೊಂಡವರು, ಲಕ್ಷಾಂತರ ಲಾಭ ಪಡೆದುಕೊಳ್ಳುವವರು ಇಂದು ಮಾಧ್ಯಮಗಳ ಮಾಲೀಕರಾಗಿದ್ದಾರೆ. ಇಂಡಸ್ಟಿçಗಳನ್ನು ಮಾರಾಟ ಮಾಡುವ ರೀತಿಯಲ್ಲಿ ಮಾಧ್ಯಮ ಸಂಸ್ಥೆಗಳನ್ನು ಮಾರಾಟ ಮಾಡಲಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಅವ್ವ ಸೇವಾ ಟ್ರಸ್ಟ್ ಪತ್ರಿಕಾ ದಿನಾಚರಣೆ ದಿನ ಓರ್ವ ಶ್ರೇಷ್ಠ ಮಹಿಳಾ ಪತ್ರಕರ್ತರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಅವರನ್ನು ಗೌರವಿಸಬೇಕು ಎನ್ನುವ ಕಲ್ಪನೆ ವಿಶಿಷ್ಠವಾಗಿದೆ. ವಿಧಾನ ಪರಿಷತ್‌ನಲ್ಲಿ ಕಲಾಪಗಳಲ್ಲಿ ಮಾತನಾಡಿರುವ ಸಂದೇಶಗಳನ್ನು ಜನರಿಗೆ ಮುಟ್ಟಿಸುವಲ್ಲಿ ಪತ್ರಕರ್ತೆ ಕೆ.ಎಚ್. ಸಾವಿತ್ರಿ ಅವರು ಕಾರ್ಯನಿರ್ವಹಿಸಿದ್ದಾರೆ. ವಿಧಾನ ಪರಿಷತ್ತಿನ ಆಲೋಚನಾ ಪ್ರಕ್ರಿಯೆ, ರಾಜಕೀಯ ತತ್ವಸಿದ್ಧಾಂತಗಳನ್ನು, ಆಲೋಚನೆಗಳನ್ನು ಜನರಿಗೆ ತಿಳಿಸುವ ಮೂಲಕ ನಮ್ಮನ್ನು ಪರಿಚಯಿಸುತ್ತಿದ್ದರು. ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ ಅತ್ಯಂತ ಬಡತನದಲ್ಲಿರುವ ಹೆಣ್ಣು ಮಕ್ಕಳ ಶಿಕ್ಷಣವನ್ನು ಮುಂದುವರಿಸಲು ಅವ್ವ ಸೇವಾ ಟ್ರಸ್ಟ್ ಮೂಲಕ ಸಹಾಯ ಮಾಡಲಾಗುತ್ತಿದೆ. ಅಲ್ಲದೇ, ಹತ್ತು ಹಲವೆಡೆ ಅವ್ವ ಸೇವಾ ಟ್ರಸ್ಟ್ ಮೂಲಕ ದತ್ತಿನಿಧಿ ಸ್ಥಾಪಿಸಿ ಮಹಿಳೆಯರನ್ನು ಪ್ರೋತ್ಸಾಹಿಸುವ, ಗೌರಿಸುವ ಕೆಲಸ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ, ಅದರಲ್ಲೂ ಇಂದಿನ ಯುವಕರು ತಮ್ಮ ತಂದೆ-ತಾಯಿಯನ್ನು ಪೂಜ್ಯ ಭಾವನೆಯಿಂದ ನೋಡಿಕೊಳ್ಳಬೇಕು. ಗೌರವಿಸುವುದನ್ನು ಕಲಿಯಬೇಕು. ತಂದೆ ತಾಯಿ ಪೋಷಣೆ ಮಾಡಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.
ಶಿಕ್ಷಕರ ಪ್ರತಿನಿಧಿಯಾಗಿ 4 ವಿವಿಧ ಖಾತೆಗಳ ಸಚಿವನಾಗಿ, ಮೂರು ಬಾರಿ ವಿಧಾನ ಪರಿಷತ್ ಸಭಾಪತಿಯಾದ ಹೆಗ್ಗಳಿಕೆ ನನ್ನದು. ಈ ಎಲ್ಲ ಶ್ರೇಯಸ್ಸು ನನ್ನ ಶಿಕ್ಷಕ ಪ್ರತಿನಿಧಿಗಳಿಗೆ ಸಲ್ಲುತ್ತದೆ ಎಂದು ಹೇಳಿದರು. ಪತ್ರಕರ್ತರು ತಮ್ಮ ಸ್ಪಷ್ಟವಾದ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು , ಪತ್ರಿಕಾ ಧರ್ಮವನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಣಮಂತ್ರಿಯಾಗಿದ್ದಾಗ ಶಾಲಾ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಿಸಿದ್ದರ ಕುರಿತು ಸ್ಮರಿಸಿಕೊಂಡ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಅವ್ವ ಸೇವಾ ಟ್ರಸ್ಟ್ ನಿಂದ ದತ್ತಿನಿಧಿ ಪ್ರಶಸ್ತಿಯನ್ನು ಮಹಿಳೆಯರಿಗೆ ಕೊಡಬೇಕೆಂಬುದು ತಮ್ಮ ತಾಯಿಯ ಆಶಯವಾಗಿತ್ತು ಎಂದು ತಿಳಿಸಿದರು.
ಕಾರ್ಯ ನಿರತ ಪತ್ರಕರ್ತರ ಸಂಘದಿAದ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ರಾಜ್ಯಮಟ್ಟದ ಮಹಿಳಾ ಪತ್ರಕರ್ತರಿಗಾಗಿ ಪ್ರಶಸ್ತಿ ನೀಡಲು ಸ್ಥಾಪಿಸಿರುವ ದತ್ತಿ ನಿಧಿಯ 2024 ನೇ ಸಾಲಿನ ಪ್ರಶಸ್ತಿಯನ್ನು ಹಿರಿಯ ಮಹಿಳಾ ಪತ್ರಕರ್ತರಾದ ಕೆ.ಎಚ್.ಸಾವಿತ್ರಿ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ಪತ್ರಕರ್ತೆ ಕೆ.ಎಚ್. ಸಾವಿತ್ರಿ ಅವರು ಒಬ್ಬ ಪತ್ರಕರ್ತ ಸಮಾಜದ ಕಣ್ಣಾಗಿರಬೇಕು, ಕಣ್ಣಾಗದಿದ್ದರೂ, ಕುರುಡನಾಗಬಾರದು. ಅಲ್ಲದೇ, ಬದ್ಧತೆ, ಪ್ರಾಮಾಣಿಕತೆ, ಸಹನೆ ಪ್ರಮುಖವಾಗಿ ಬೇಕಾಗುತ್ತದೆ. ಜನರ, ಓದುಗರ ನಂಬಿಕೆಯನ್ನು ಹುಸಿಯಾಗಲು ಬಿಡಬಾರದು. ಜೊತೆಗೆ ನಮ್ಮಲ್ಲಿರುವ ಮನುಷ್ಯತ್ವ, ಅಂತಃಕರಣದಿAದ ನಾವು ಮಾಡಿದ ಕೆಲಸಗಳನ್ನು ತೃಪ್ತಿ ನೀಡುತ್ತವೆ ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಪತ್ರಿಕಾ ಭವನದಲ್ಲಿ ಕೇವಲ ಸುದ್ದಿಗೋಷ್ಠಿಗಳನ್ನು ಮಾಡಲು ಸ್ಥಳಾವಕಾಶವಿದ್ದು, ಪತ್ರಿಕಾ ಭವನದ ಮೊದಲ ಮಹಡಿಯಲ್ಲಿ ಸಭಾಭವನ ನಿರ್ಮಾಣ ಕಾಮಗಾರಿಗೆ ಅನುದಾನ ಒದಗಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿAದ ದ್ವಿತೀಯ ಪಿಯುಸಿ ಅತ್ಯಧಿಕ ಅಂಕ ಗಳಿಸಿದ ಭರತ್ ಬೆಟಗೇರಿ, ಪೂಜಾ ವಗ್ಗಿ, ಫಹಮೀದಾ ಕಾಗದಗಾರ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಶಿವರಾಜ ಗುರಿಕಾರ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕöÈತ ವೆಂಕಟೇಶ ಇಮರಾಪೂರ, ಮಾಳಿಂಗರಾಯ ಪೂಜಾರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಗಣ್ಯರಾದ ಪ್ರಭು ಬುರಬುರೆ, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪದಾಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಅಬ್ಬಿಗೇರಿ, ಅವ್ವ ಸೇವಾ ಟ್ರಸ್ಟ್ ಸಂಚಾಲಕ ಡಾ. ಬಸವರಾಜ ಧಾರವಾಡ, ಸಯ್ಯದ್ ಸನಾವುಲ್ಲಾ,,ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ. ವಾರ್ತಾಧಿಕಾರಿ ವಸಂತ ಮಡ್ಲೂರ, ಪತ್ರಕರ್ತರು ಇದ್ದರು. ಆನಂದಯ್ಯ ವಿರಕ್ತಮಠ ಕಾರ್ಯಕ್ರಮ ನಿರೂಪಿಸಿದರು. ಮೌನೇಶ ಬಡಿಗೇರ ವಂದಿಸಿದರು.